ಅರೆಭಾಷೆ ಕಾರ್ಯಾಗಾರಕ್ಕೆ ಹೆಸರು ನೋಂದಾಯಿಸಲು ಮನವಿ

February 12, 2021

ಮಡಿಕೇರಿ ಫೆ.12 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ದೃಶ್ಯ ಮಾಧ್ಯಮದಲ್ಲಿ ಅರೆಭಾಷೆ ಬಗ್ಗೆ ಮೂರು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಆಸಕ್ತರು ಅಕಾಡೆಮಿ ಕಚೇರಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಸೀಮಿತ ಸದಸ್ಯರಿಗೆ ಮಾತ್ರ ಅವಕಾಶ ಇರುವುದರಿಂದ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಎಂದು ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ. ಹೆಸರು ನೋಂದಾಯಿಸಿಕೊಳ್ಳಲು ಫೆಬ್ರವರಿ, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ.ನಂ. 6362522677 ನ್ನು ಮತ್ತು arebaseacademy@gmail.com ನ್ನು ಸಂಪರ್ಕಿಸಬಹುದು.

error: Content is protected !!