ಸಾಹಿತಿ ಚುಟುಕು ರತ್ನ ಕೇಚಮಾಡ ಸುಬ್ಬಮ್ಮ ತಿಮ್ಮಯ್ಯ ನಿಧನ

February 13, 2021

ಮಡಿಕೇರಿ ಫೆ.13 : ಕನ್ನಡ ಮತ್ತು ಕೊಡವ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿರುವ ಹಿರಿಯ ಸಾಹಿತಿ ಚುಟುಕು ರತ್ನ ಕೇಚಮಾಡ ಸುಬ್ಬಮ್ಮ ತಿಮ್ಮಯ್ಯ ಅವರು(91) ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೂಲತಃ ಕಾನೂರು ಗ್ರಾಮದ ನಿವಾಸಿಯಾಗಿರುವ ಇವರು ನಿವೃತ್ತ ಶಿಕ್ಷಕರು. ಪೆÇನ್ನಂಪೇಟೆ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷರಾಗಿ ಸಾಹಿತ್ಯದ ರಥವನ್ನು ಎಳೆದಿದ್ದರು. ಇವರು ಕನ್ನಡ ಮತ್ತು ಕೊಡವ ಭಾಷೆಯಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು ಹಲವು ಕೃತಿಗಳನ್ನು ರಚಿಸಿದ್ದಾರೆ.

error: Content is protected !!