42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

February 13, 2021

ಬೆಂಗಳೂರು ಫೆ.13 : ಒಂಭತ್ತು ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ನೀಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಆಯುಕ್ತರಾಗಿ ಕೆ.ವಿ. ತ್ರಿಲೋಕಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ತ್ರಿಲೋಕ್ ಅವರು ಈ ಹಿಂದೆ ಕರ್ನಾಟಕ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೆÇೀರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು.

error: Content is protected !!