ಮಕ್ಕಂದೂರು ಪ್ರೌಢಶಾಲಾ ಶಿಕ್ಷಕರಿಗೆ ದಲಿತ ಸಂಘರ್ಷ ಸಮಿತಿಯಿಂದ ಸನ್ಮಾನ

February 14, 2021

ಮಡಿಕೇರಿ ಫೆ.14 : ಹತ್ತನೇ ತರಗತಿಯಲ್ಲಿ ಸತತವಾಗಿ ಶೇ.100ರಷ್ಟು ಪಲಿತಾಂಶ ಪಡೆಯುತ್ತಿರುವ ಮಕ್ಕಂದೂರು ಪ್ರೌಢಶಾಲಾ ಶಿಕ್ಷಕರನ್ನು ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ದಿವಾಕರ್ ಅವರು ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ, ಶಿಕ್ಷಕರೇ ನೈಜ ದೇವರುಗಳು, ಅವರನ್ನು ಗೌರವಿಸಬೇಕು ಎಂದು ಹೇಳಿದರು.    

ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್.ಎ.ಪಿ ಮಾತನಾಡಿ ವಿದ್ಯಾರ್ಥಿಗಳಿಗೆ ಗುರಿ ಮುಖ್ಯ ಎಂದರು. ಶಾಲೆಯ ಪ್ರಾಂಶುಪಾಲ ಶುಕ್ರುದೇವೆಗೌಡ ಅವರು ವಂದಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಪ್ರಮುಖರಾದ ಅಂಬೆಕಲ್ ನವೀನ್ ಕುಶಾಲಪ್ಪ ದಂಪತಿಗಳು, ಕೆನರಾ ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಶ್ರೀಹರಿ, ಶಕ್ತಿ ದಿನಪತ್ರಿಕೆಯ ಉಪಸಂಪಾದಕರಾದ ಕುಡೆಕಲ್ ಸಂತೋಶ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಶಿಕ್ಷಕರು ಹಾಗು ವಿದ್ಯಾರ್ಥಿಗಳು ಹಾಜರಿದ್ದರು.

error: Content is protected !!