ಎಫ್‍ಡಿಎ ಮತ್ತು ಎಸ್‍ಡಿಎ ಹುದ್ದೆಗಳ ನೇಮಕಾತಿ ಪರೀಕ್ಷೆ : ಉಚಿತ ಪೂರ್ವ ತರಬೇತಿ

February 15, 2021

ಮಡಿಕೇರಿ ಫೆ.15 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯ ಅಡಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ/ಮಾರ್ಚ್-2021ರ ಮಾಹೆಯಲ್ಲಿ ನಡೆಸಲಿರುವ ಎಫ್‍ಡಿಎ ಮತ್ತು ಎಸ್‍ಡಿಎ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಯು ಫೆ.18 ರಿಂದ 26 ರವರೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ.
ಉಚಿತ ಪರೀಕ್ಷಾ ಪೂರ್ವ ತರಬೇತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಇವರು ನಿಗಧಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿ ನೀಡಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇಲ್ಲಿನ ದೂರವಾಣಿ ಸಂಖ್ಯೆ: 08272-225851 ಅಥವಾ 8123312319 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!