ಮಡಿಕೇರಿಯಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಸಚಿವ ಭೈರತಿ ಬಸವರಾಜ

February 15, 2021

ಮಡಿಕೇರಿ ಫೆ.15 : ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಕೂಟುಹೊಳೆ ಮತ್ತು ಕುಂಡಾಮೇಸ್ತ್ರಿ ಯೋಜನೆ ವೀಕ್ಷಿಸಿದರು. ಹಾಗೆಯೇ ಮಲೀನ ನೀರು ಶುದ್ಧೀಕರಣ ಘಟಕ ನಿರ್ಮಿಸುವ ಜಾಗವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ವಿರೂಪಾಕ್ಷ, ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಮುಖ್ಯ ಅಭಿಯಂತರರಾದ ಸಿದ್ದನಾಯಕ, ಇಇ ರಾಜ್‍ಗೋಪಾಲ್, ಎಇಇ ಅಜಯ್ ಇತರರು ಹಲವು ಮಾಹಿತಿ ನೀಡಿದರು.

error: Content is protected !!