ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 36

February 16, 2021

ಮಡಿಕೇರಿ ಫೆ.16 : ಜಿಲ್ಲೆಯಲ್ಲಿ ಮಂಗಳವಾರ 1 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ. 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6145 ಆಗಿದ್ದು, 6028 ಮಂದಿ ಗುಣಮುಖರಾಗಿದ್ದಾರೆ. 36 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 33 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!