‘ದೃಶ್ಯ ಮಾಧ್ಯಮದಲ್ಲಿ ಅರೆಭಾಷೆ’ ಕುರಿತು ಕಾರ್ಯಾಗಾರ

February 17, 2021

ಮಡಿಕೇರಿ ಫೆ.17 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ‘ದೃಶ್ಯ ಮಾಧ್ಯಮದಲ್ಲಿ ಅರೆಭಾಷೆ’ ಕುರಿತು ಮೂರು ದಿನಗಳ ಕಾರ್ಯಾಗಾರ ನಡೆಯಲಿದ್ದು, ಆಸಕ್ತರು ಅಕಾಡೆಮಿ ಕಚೇರಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ಫೆಬ್ರವರಿ, 20 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ.ನಂ.6362522677 ನ್ನು ಮತ್ತು arebaseacademy@gmail.com ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

error: Content is protected !!