ಸಾಲ ಬಾಧೆ : ಕಲ್ಲುಕೋರೆ ಗ್ರಾಮದ ಕೃಷಿಕ ನೇಣಿಗೆ ಶರಣು

February 17, 2021

ಮಡಿಕೇರಿ ಫೆ.17 : ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾವೇರಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಹಾಗೂ 7ನೇ ಹೊಸಕೋಟೆಯ ನಾಗರಿಕ ಹಿತರಕ್ಷಣಾ ಸಮಿತಿಯ ಟ್ರಸ್ಟ್ ಅಧ್ಯಕ್ಷ ಕೆರೆಮನೆ ಮಂಜುನಾಥ್ (53) ತೋಟದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಕಲ್ಲುಕೋರೆ ಗ್ರಾಮದ ನಿವಾಸಿ ಕೆರೆಮನೆ ಮಂಜುನಾಥ್ ಕೃಷಿಕರಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್, ಹಾಗೂ ಇನ್ನಿತರ ಬ್ಯಾಂಕ್, ಖಾಸಗಿ ವ್ಯಕ್ತಿಗಳಲ್ಲಿ ಸಾಲವನ್ನು ಮಾಡಿಕೊಂಡಿದ್ದು ಸಾಲದ ಭಾದೆ ತಾಳಲಾರದೆ ತಮ್ಮ ವಾಸದ ಮನೆಯ ಮುಂಭಾಗದ ತೋಟದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ನಿ ರಾಣಿ ಸುಂಟಿಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಂಟಿಕೊಪ್ಪ ಠಾಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.