ಕೊಡಗಿನಲ್ಲಿ ಕೋವಿಡ್ : 27 ಸಕ್ರಿಯ ಪ್ರಕರಣ

February 18, 2021

ಮಡಿಕೇರಿ ಫೆ. 18 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6151 ಆಗಿದ್ದು, 6042 ಮಂದಿ ಗುಣಮುಖರಾಗಿದ್ದಾರೆ.
27 ಸಕ್ರಿಯ ಪ್ರಕರಣಗಳಿದ್ದು, 82 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 32 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!