ಮಾಲ್ದಾರೆಯಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಕೆ ಎಸ್ ಡಬ್ಲ್ಯು ಎ ಗಲ್ಫ್ ಸಮಿತಿ : ಫೆ 19 ರಂದು ಕೀ ಹಸ್ತಾಂತರ

February 18, 2021

ಮಡಿಕೇರಿ ಫೆ.18 : ವಾಸಿಸಲು ಮನೆ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದ ಬಡ ನಿರ್ಗತಿಕ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಟ್ಟು ಮಾನವೀಯತೆ ಮೆರೆದಿರುವ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ (ಜಿ.ಸಿ.ಸಿ ಗಲ್ಫ್ )ಸಮಿತಿಯ ಸೇವಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತೆ ಕುಟುಂಬಕ್ಕೆ ನಿರ್ಮಿಸಿರುವ   ದಾರುಲ್ ಖೈರ್  ಮನೆಯ ಕೀ ಹಸ್ತಾಂತರ ಕಾರ್ಯಕ್ರಮ  ಫೆ 19 ರಂದು 2 ಗಂಟೆಗೆ   ಮಾಲ್ದಾರೆಯಲ್ಲಿ ನಡೆಯ ಲಿದ್ದು. ಕಾರ್ಯಕ್ರಮಕ್ಕೆ ಧಾರ್ಮಿಕ ಪಂಡಿತರು’ ದಾನಿಗಳು, ಸಮಾಜ ಸೇವಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಕಂಡಕೆರೆ ಆಬೀದ್ ಪತ್ರಿಕೆಗೆ ತಿಳಿಸಿದ್ದಾರೆ. ಸಮಿತಿಯು ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜಿಲ್ಲೆಯಲ್ಲಿ ಇದುವರೆಗೂ 3ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಪ್ರವಾಹ ಹಾಗೂ ಪ್ರಕೃತಿ ವಿಕೋಪ ಸಂದರ್ಭದಲ್ಲಿ  ಜಿಲ್ಲೆಯಲ್ಲಿ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಕಿಟ್ ಹಾಗೂ ಧನಸಹಾಯ ನೀಡಲಾಗಿದೆ. ಹಲವು ಮನೆಗಳ ದುರಸ್ತಿ ಕಾರ್ಯ , ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯ, ಶಿಕ್ಷಣ, ವೈದ್ಯಕೀಯ ಸೇವೆಗೂ  ಆರ್ಥಿಕ ನೆರವು ನೀಡಲಾಗಿದೆ ಎಂದರು.

error: Content is protected !!