ಫೆ.19 ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕೊಂಡಂಗೇರಿಗೆ ಭೇಟಿ

February 18, 2021

ಮಡಿಕೇರಿ ಫೆ.18 : ಕೊಂಡಂಗೇರಿಯ ಬುಲೆಟ್ ಫ್ರೆಂಡ್ಸ್ ವತಿಯಿಂದ ಫೆ.19 ರಂದು ನಡೆಯುತ್ತಿರುವ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಪಾಲ್ಗೊಂಡು ಪಂದ್ಯಾವಳಿ ವೀಕ್ಷಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
::: ಫೆ.21 ರಂದು ಪದಗ್ರಹಣ :::
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಧ್ರುವನಾರಾಯಣ್ ಹಾಗೂ ರಾಮಲಿಂಗ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮ ಫೆ.21 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲಾ ಘಟಕಗಳ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.

error: Content is protected !!