ಪ್ರತಿಭಟನೆಗೆ ಕೊಡಗು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಯ ಒಕ್ಕೂಟ ಬೆಂಬಲ

February 19, 2021

ಮಡಿಕೇರಿ ಫೆ.19 : ಖಾಸಗಿ ಶಾಲೆಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.23 ರಂದು ಕ್ಯಾಮ್ಸ್ ರಾಜ್ಯ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಗೆ ಕೊಡಗು ಅನುದಾನ ರಹಿತ ಶಾಲಾ ಆಡಳಿತ ಮಂಡಳಿಯ ಒಕ್ಕೂಟ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೊಡಗಿನಿಂದಲೂ ಶಿಕ್ಷಕರು ತೆರಳುತ್ತಿರುವುದರಿಂದ ಅಂದು ಖಾಸಗಿ ಅನುದಾನ ರಹಿತ ಶಾಲೆಗಳನ್ನು ಮುಚ್ಚಲಾಗುವುದೆಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

error: Content is protected !!