ಶನಿವಾರಸಂತೆ ತಪೋವನ ಮನೆಹಳ್ಳಿ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಥಸಪ್ತಮಿ ಉತ್ಸವ

February 19, 2021

ಮಡಿಕೇರಿ ಫೆ.19 : ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ರಥಸಪ್ತಮಿ ಹಾಗೂ ತಪೋವನೇಶ್ವರಿ ದೇವಿಯ ವರ್ದಂತಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ಅಂಕನಳ್ಳಿ ಸಮೀಪದ ಧಾರ್ಮಿಕ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಇಂದು ಬೆಳಗ್ಗಿನಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಕ್ಷೇತ್ರ ದೇವರು ವೀರಭದ್ರ ಸ್ವಾಮಿ ಹಾಗೂ ಜೇನುಕಲ್ಲು ಸಿದ್ದೇಶ್ವರ(ಅಜ್ಜಯ್ಯ) ಸನ್ನಿಧಿಯಲ್ಲಿ ರುದ್ರಾಭಿಷೇಕ, ಅಷ್ಟೋತ್ತರ ಮತ್ತು ಮಹಾಮಂಗಳಾರತಿ ನಡೆಯಿತು.
ತಪೋವನೇಶ್ವರಿ ದೇವಿ ಸನ್ನಿಧಾನದಲ್ಲಿ ಕೂಡ ಅರ್ಚನೆ, ಅಷ್ಟೋತ್ತರ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗವಾಯಿತು. ಮಹಿಳೆಯರು ದೇವಿಗೆ ಸೀರೆ, ಮಡಿಲು ಅಕ್ಕಿ ಸಮರ್ಪಿಸಿ ಭಕ್ತಿಭಾವ ಮೆರೆದರು.
ಮನೆಹಳ್ಳಿ ಮಠಾಧೀಶರಾದ ಮಹಾಂತ ಶಿವಲಿಂಗ ಸ್ವಾಮೀಜಿ, ಬಸವಪಟ್ಟಣ ತೋಂಟದಾರ್ಯ ಸಂಸ್ಥಾನ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಶಿಡಿಗಳಲೇ ಮಠಾಧೀಶರಾದ ಇಮ್ಮಡಿ ಶಿವಲಿಂಗ ಸ್ವಾಮೀಜಿ ಮತ್ತಿತರರು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದರು.

error: Content is protected !!