ಮಡಿಕೇರಿ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಥಸಪ್ತಮಿ ಉತ್ಸವ

19/02/2021

ಮಡಿಕೇರಿ ಫೆ.19 : ಮಡಿಕೇರಿ ನಗರದ ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯದಲ್ಲಿ ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ವಿಶೇಷ ಅಲಂಕಾರ, ಮಹಾಪೂಜೆ ಮತ್ತು ಮಹಾಮಂಗಳಾರತಿಗೆ ಭಕ್ತಾಧಿಗಳು ಸಾಕ್ಷಿಯಾದರು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.