ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

February 20, 2021

ಮಡಿಕೇರಿ ಫೆ.20 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಅವರು 2021-22 ನೇ ಸಾಲಿನ ಕೇಂದ್ರ ಸರ್ಕಾರದ “ವಯೋಶ್ರೇಷ್ಠ ಸಮ್ಮಾನ್-2021” ರಾಷ್ಟ್ರ ಪ್ರಶಸ್ತಿಗೆ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವವರಿಂದ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ಅರ್ಹ ಹಿರಿಯ ನಾಗರಿಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಆಂಗ್ಲ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ತ್ರಿಪ್ರತಿಗಳಲ್ಲಿ ಮಾರ್ಚ್, 03 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ http://socialjustice.nic.in ಪರಿಶೀಲಿಸಲು ಮತ್ತು ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಮತ್ತು ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಇವರನ್ನು ಹಾಗೂ ದೂ.ಸಂ.08272-295829 ಮತ್ತು 080-22866066, 080-22866046 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.

error: Content is protected !!