ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಪ್ರವೇಶ ಶುಲ್ಕ ನಿಗಧಿ

February 20, 2021

ಮಡಿಕೇರಿ ಫೆ.20 : ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿ ಜನರಲ್ ತಿಮ್ಮಯ್ಯ ಅವರ ಜೀವನ ಚಿತ್ರಣವನ್ನು ಬಿಂಬಿಸಲಾಗಿದೆ. ಮಕ್ಕಳಲ್ಲಿ ಯುವಕರಲ್ಲಿ ಹಾಗೂ ಜನರಲ್ಲಿ ದೇಶ ಪ್ರೇಮದೊಂದಿಗೆ ಸೇನೆಯ ಬಗ್ಗೆ ಅಭಿಮಾನ ಗೌರವವನ್ನು ಮೂಡಿಸುವ ಪ್ರಯತ್ನ ಮಾಡಲಾಗಿದೆ.
ಆ ದಿಸೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ನಿರ್ವಹಣೆಗೆ ಸಂಪನ್ಮೂಲ ಕ್ರೋಢೀಕರಿಸುವ ಅವಶ್ಯಕತೆ ಇರುವುದರಿಂದ ಇಲ್ಲಿಗೆ ಆಗಮಿಸುವವರಿಗೆ ಪ್ರವೇಶ ಶುಲ್ಕ ನಿಗಧಿಪಡಿಸಬೇಕಾಗಿದೆ. ಅದರಂತೆ, ಜಿಲ್ಲಾಧಿಕಾರಿ ಅವರ ಆದೇಶದನ್ವಯ ಹದಿನೈದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಲಾ ರೂ.15, ಹದಿನೈದು ವರ್ಷದಿಂದ ಮೇಲ್ಪಟ್ಟ ವಯಸ್ಸಿವರಿಗೆ ತಲಾ ರೂ.30 ಹಾಗೂ ಐದು ವರ್ಷದ ವಯಸ್ಸಿನವರೆಗಿನ ಮಕ್ಕಳಿಗೆ ಉಚಿತ ಪ್ರವೇಶ ನಿಗದಿಗೊಳಿಸಲಾಗಿದೆ. ಹಾಗೂ ಪ್ರತಿ ಸೋಮವಾರದಂದು ಮ್ಯೂಸಿಯಂ ರಜೆ ಇರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಅವರು ತಿಳಿಸಿದ್ದಾರೆ.

error: Content is protected !!