ಕೋವಿಡ್ ಮುಂಜಾಗೃತಾ ಕ್ರಮ : ಕುಟ್ಟ-ತೋಳ್ಪಟ್ಟಿ ಚೆಕ್‍ಪೋಸ್ಟ್‍ಗಳಿಗೆ ಜಿಲ್ಲಾಧಿಕಾರಿ ಭೇಟಿ

February 20, 2021

ಮಡಿಕೇರಿ ಫೆ.20 : ‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಶ್ರೀಮಂಗಲ ಹೋಬಳಿ ವ್ಯಾಪ್ತಿಯ ವಿವಿಧ ಹಾಡಿ, ವಿದ್ಯಾರ್ಥಿ ನಿಲಯ, ಅಂಗನವಾಡಿ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಶ್ರೀಮಂಗಲ ಹೋಬಳಿ ವ್ಯಾಪ್ತಿಯ ಕುರ್ಚಿ ಕಾಲೋನಿಗೆ ಭೇಟಿ ನೀಡಿ ಆದಿವಾಸಿ ಜನರ ಅಹವಾಲು ಆಲಿಸಿದರು. ಬಳಿಕ ಅಂಗನವಾಡಿ ಕೇಂದ್ರಕ್ಕೆ ತೆರಳಿ ಮಾಹಿತಿ ಪಡೆದರು.
ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು. ಶ್ರೀಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಿಸಿಎಂ ವಿದ್ಯಾರ್ಥಿ ನಿಲಯ, ಪ್ರಾಥಮಿಕ ಶಾಲೆ ಹಾಗೂ ಆಟದ ಮೈದಾನಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಸಭೆಯ ನಂತರ ನಾಣಚ್ಚಿ ಹಾಗೂ ನಾಗರಹೊಳೆ ಹಾಡಿಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆ ಪರಿಶೀಲಿಸಿದರು. ಬಳಿಕ ಕೊಡಗು-ಕೇರಳ ಗಡಿಭಾಗದ ಕುಟ್ಟ-ತೋಳ್ಪಟ್ಟಿ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಕೊರೊನಾ ನಿಯಂತ್ರಣ ಸಂಬಂಧ ನಿಯಮನುಸಾರ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಚೆಕ್‍ಪೋಸ್ಟ್ ಸಿಬ್ಬಂಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

error: Content is protected !!