ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಮಾತೃಭಾಷಾ ದಿನಾಚರಣೆ

February 21, 2021

ಮಡಿಕೇರಿ ಫೆ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮಡಿಕೇರಿಯ ಜೂನಿಯರ್ ಕಾಲೇಜ್ ಸಮೀಪದ ಕೊಡವ ಕೋಲ್ ಮಂದ್ ನಲ್ಲಿ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ನಡೆಯಿತು.
ವಿಶಿಷ್ಟವಾದ ಕೊಡವ ಭಾಷೆಯನ್ನು 8 ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು. ಕೊಡವರನ್ನು ಬುಡಕಟ್ಟು ಜನಾಂಗವೆಂದು ಘೋಷಿಸಬೇಕು, ರಾಜ್ಯಾಂಗ ಖಾತ್ರಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಗಮನ ಸೆಳೆದರು. ಸಂಘಟನೆಯ ಪ್ರಮುಖರು ಈ ಸಂದರ್ಭ ಹಾಜರಿದ್ದರು.

error: Content is protected !!