ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ : ಯುವಕ ಸಾವು : ಗೌಡಳ್ಳಿಯಲ್ಲಿ ಘಟನೆ

February 22, 2021

ರಸ್ತೆ ದಾಟುತ್ತಿದ್ದ ಸಂದರ್ಭ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಗೌಡಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಗೋಡಿನ ಯುವಕ ದಿನೇಶ್ ( 25) ಸಾವನ್ನಪ್ಪಿದ ಯುವಕ. ದಿನೇಶ್ ರಸ್ತೆ ದಾಡುವಾಗ ಗೌಡಳ್ಳಿ ಮಾರ್ಗವಾಗಿ ಬಂದ ಬಸ್ ಡಿಕ್ಕಿಪಡಿಸಿದ ಪರಿಣಾಮ ಗಂಭೀರ ಗಾಯಗಳಾಗಿದೆ. ನಂತರ ಅರಕಲಗೋಡುವಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬಸ್ ವಶಪಡಿಸಿಕೊಂಡು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಶೈಲೇಂದ್ರ, ಸಿಪಿಐ ಮಹೇಶ್, ಪಿಎಸ್ಐ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು.

error: Content is protected !!