ಫೆ.23 ರಂದು ಮಡಿಕೇರಿಯಲ್ಲಿ ಅರೆಭಾಷೆ ಸಂಸ್ಕೃತಿ ತರಬೇತಿ ಶಿಬಿರ

February 22, 2021

ಮಡಿಕೇರಿ.ಫೆ.22 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಏಳು ದಿನಗಳ ಅರೆಭಾಷೆ ಸಂಸ್ಕøತಿ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಫೆಬ್ರವರಿ, 23 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಮಹಿಳಾ ಒಕ್ಕೂಟ(ಗುಡ್ಡೆಮನೆ ಅಯ್ಯಪ್ಪಗೌಡ ರಸ್ತೆ) ಇಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಅಂಬೆಕಲ್ಲು ಸುಶೀಲ ಕುಶಾಲಪ್ಪ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಮಡಿಕೇರಿ ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಕುಂಜಿಲನ ಮುತ್ತಮ್ಮ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

error: Content is protected !!