ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ : ಸಿಎಂ ಸೇರಿ ಗಣ್ಯರು ಭಾಗಿ

February 22, 2021

ಕನ್ನಡದ ಹಿರಿಯ ನಿರ್ದೇಶಕ ಎಸ್. ನಾರಾಯಣ್ ಅವರ ಮನೆ ಮದುವೆ ಸಂಭ್ರಮದಿಂದ ಕೂಡಿದೆ. ನಟ, ನಿರ್ದೇಶಕ, ನಿರ್ಮಾಪಕ ಎಸ್ ನಾರಾಯಣ್ ಅವರ ಪುತ್ರ ಪವನ್ ಕುಮಾರ್ ಇಂದು ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಫೆಬ್ರವರಿ 21ರ ಬೆಳಗ್ಗೆ 7.30 ರಿಂದ 8.30 ಗಂಟೆಗೆ ನಡೆದ ಶುಭ ಲಗ್ನದಲ್ಲಿ ಪವಿತ್ರಾ ಅವರನ್ನು ಪವನ್ ಕುಮಾರ್ ವರಿಸಿದ್ದಾರೆ. ನಂತರ 10 ಗಂಟೆಗೆ ಆರತಕ್ಷತೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು.

ಎಸ್. ನಾರಾಯಣ್ ಅವರ ಪುತ್ರನ ವಿವಾಹಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು. ಸಚಿವ ಗೋಪಾಲಯ್ಯ ಸಹ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

error: Content is protected !!