ಫೆ.25 ಮತ್ತು 26 ರಂದು ಮಡಿಕೇರಿಯಲ್ಲಿ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ

February 22, 2021

ಮಡಿಕೇರಿ ಫೆ.22 : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಇತಿಹಾಸ ಮತ್ತು ಐಕ್ಯೂಎಸಿ ವಿಭಾಗ ಇವರ ಸಹಯೋಗದೊಂದಿಗೆ ಫೆಬ್ರವರಿ, 25 ಮತ್ತು 26 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.
ಫೆಬ್ರವರಿ, 25 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕರಾದ ರಾಜಮ್ಮ ಚೌಡರೆಡ್ಡಿ, ಸ.ಪ್ರ.ದ.ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾದ ಎಚ್.ಎಲ್.ಮಂಜುನಾಥ, ಮಡಿಕೇರಿ ಸ.ಪ್ರ.ದ.ಮ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಐಕ್ಯೂಎಸಿ ಸಂಚಾಲಕರಾದ ಎನ್.ಪಿ.ಸತೀಶ್, ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಚಾಲಕರಾದ ಡಾ.ಡಿ.ಕನ್ನಿಕಾ ಇತರರು ಪಾಲ್ಗೊಳ್ಳಲಿದ್ದಾರೆ.
ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನವು ಫೆಬ್ರವರಿ, 25 ಮತ್ತು 26 ರಂದು ಬೆಳಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

error: Content is protected !!