ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಂಟಲು ದ್ರವ ಪರೀಕ್ಷೆ

February 23, 2021

ಸುಂಟಿಕೊಪ್ಪ,ಫೆ.23: ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಯಿತು.
ಶಾಲೆಯ 6 ಮತ್ತು 7 ನೇ ತರಗತಿ ಮಕ್ಕಳು ಹಾಗೂ ಶಿಕ್ಷಕರಿಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಸರ್ಗ ಹಾಗೂ ಸಿಬ್ಬಂದಿಗಳು ಮಕ್ಕಳ ಮತ್ತು ಶಿಕ್ಷಕರ ಗಂಟಲು ದ್ರವ ಪರೀಕ್ಷೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾದ್ಯಾಯನಿ ವೀರಾ ಡಿಸೋಜ ಸಹಶಿಕ್ಷಕರು ಇದ್ದರು.

error: Content is protected !!