ಪ್ರಾಕೃತಿಕ ವಿಕೋಪ ಸಂದರ್ಭ ಮಾನವ ರಕ್ಷಣೆ : ಗಮನ ಸೆಳೆದ ಪ್ರಾತ್ಯಕ್ಷಿಕೆ

February 23, 2021

ಮಡಿಕೇರಿ ಫೆ.23 : ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಮಂಗಳವಾರ ಪ್ರಾತ್ಯಕ್ಷಿಕೆ/ ಅಣಕು ಪ್ರದರ್ಶನ ನಡೆಯಿತು.
ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರ ನೇತೃತ್ವದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಅವರ ಉಪಸ್ಥಿತಿಯಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.
ಅಣಕು ಪ್ರದರ್ಶನದಲ್ಲಿ ಎನ್‍ಡಿಆರ್‍ಎಫ್, ಅಗ್ನಿಶಾಮಕ ಇಲಾಖೆ, ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ, ಹೀಗೆ ನಾನಾ ರಕ್ಷಣಾ ತಂಡಗಳು ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯ ನಿಭಾಯಿಸಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ ಗಮನ ಸೆಳೆದರು.
ಬೆಟ್ಟದಿಂದ ಕೆಳಗೆ ಹಗ್ಗ ಬಳಸಿ ನಾಗರಿಕರನ್ನು ರಕ್ಷಣೆ ಮಾಡುವುದು, ಬೆಟ್ಟದಿಂದ ಸಮತಟ್ಟು ಪ್ರದೇಶಕ್ಕೆ ಹಗ್ಗದ ಮೂಲಕ ಕಳುಹಿಸುವುದು, ರಕ್ಷಣೆ ಮಾಡಿದವರಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸುವುದು. ಚಿಕಿತ್ಸೆ ನೀಡಿದ ನಂತರ ಪರಿಹಾರ ಕೇಂದ್ರಕ್ಕೆ ಸ್ಥಳಾಂತರ ಮಾಡುವುದು. ಹೀಗೆ ನಾನಾ ರೀತಿಯ ರಕ್ಷಣಾ ಕಾರ್ಯಗಳ ಪ್ರಾತ್ಯಕ್ಷಿಕೆ ಜರುಗಿತು.
ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಮಾತನಾಡಿ ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿರುವ ಕ್ರಮಗಳ ಬಗ್ಗೆ ವಿವಿಧ ರಕ್ಷಣಾ ತಂಡಗಳಿಂದ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ. ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದರು.
ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಕ್ಷಮಾ ಮಿಶ್ರಾ ಅವರು ಮಾತನಾಡಿ ಎನ್‍ಡಿಆರ್‍ಎಫ್, ಗೃಹ ರಕ್ಷಕ ದಳ, ಅಗ್ನಿ ಶಾಮಕ ಇಲಾಖೆ ಹೀಗೆ ಹಲವು ರಕ್ಷಣಾ ತಂಡಗಳ ಜೊತೆ ಸಮನ್ವಯತೆ ಸಾಧಿಸಿ ಅಗತ್ಯ ಸಹಕಾರ ನೀಡುವ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ, ಎನ್‍ಡಿಆರ್‍ಎಫ್‍ನ ಸಹಾಯಕ ಕಮಾಂಡರ್ ಜೆ. ಸೆಂಥಿಲ್ ಕುಮಾರ್, ಹೆಡ್ ಕಾನ್‍ಸ್ಟೇಬಲ್ ಜಾವೇದ, ರಿಸರ್ವ್ ಪೆÇಲೀಸ್ ಇನ್ಸ್‍ಪೆಕ್ಟರ್ ರಾಚಯ್ಯ ಇತರರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರೀಸ್ವಾಮಿ, ತಹಶೀಲ್ದಾರ್ ಮಹೇಶ್, ಇತರರು ಇದ್ದರು.
ತಲಕಾವೇರಿ ಸುತ್ತಮುತ್ತಲಿನ ನಾಗರಿಕರು ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದರು. ಅಣಕು ಪ್ರದರ್ಶನ ನಂತರ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರು ಅಗ್ನಿಶಾಮಕ ಇಲಾಖೆ, ಎನ್‍ಡಿಆರ್‍ಎಫ್ ರಕ್ಷಣಾ ತಂಡಗಳಿಂದ ಪ್ರದರ್ಶಿಸಿದ ಉಪಕರಣಗಳ ಮಾಹಿತಿ ಪಡೆದರು.