ಕೇರಳ ರಾಜ್ಯದಿಂದ ಬರುವ ಚಾಲಕ, ನಿರ್ವಾಹಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

February 23, 2021

ಮಡಿಕೇರಿ ಫೆ.23 : ಕೇರಳ-ಕೊಡಗು ನಡುವೆ ಸಂಚರಿಸುವ ಎಲ್ಲಾ ಖಾಸಗಿ ಬಸ್ಸು, ಟ್ಯಾಕ್ಸಿ ಇತ್ಯಾದಿಗಳ ಮೂಲಕ ಸಂಚರಿಸುವ ಪ್ರಯಾಣಿಕರು ಕಡ್ಡಾಯವಾಗಿ ಕನಿಷ್ಟ 72 ಗಂಟೆಗಳ ಒಳಗೆ ಪಡೆದಿರುವ ಕೋವಿಡ್-19(ಆರ್‍ಟಿಪಿಸಿಆರ್) ನೆಗೆಟಿವ್ ವರದಿ ಹೊಂದಿರಬೇಕು ಹಾಗೂ ವಾಹನಗಳ ಚಾಲಕ, ನಿರ್ವಾಹಕರು ಕಾಲ ಕಾಲಕ್ಕೆ ಸರಿಯಾಗಿ ಕೋವಿಡ್-19(ಆರ್‍ಟಿಪಿಸಿಆರ್) ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು, ಕೊಡಗು ಜಿಲ್ಲೆಯ ಗಡಿಭಾಗದ ಜಿಲ್ಲೆಗೆ ಸೇರಿದ ಪ್ರದೇಶಗಳಲ್ಲಿ ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿದೆ.
ಆದ್ದರಿಂದ ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಯ ಮುಖಾಂತರ ಖಾಸಗಿ ಬಸ್ಸು, ಟ್ಯಾಕ್ಸಿ, ಕೆಎಸ್‍ಆರ್‍ಟಿಸಿ ಮತ್ತಿತರ ವಾಹನ ಮೂಲಕ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಚಾಲಕ, ನಿರ್ವಾಹಕರು ಕಡ್ಡಾಯವಾಗಿ ಕನಿಷ್ಟ 72 ಗಂಟೆಗಳ ಒಳಗೆ ಪಡೆದಿರುವ ಕೋವಿಡ್-19(ಆರ್‍ಟಿಪಿಸಿಆರ್) ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದ್ದಾರೆ.