ಚಿಕ್ಕಬಳ್ಳಾಪುರದಲ್ಲಿ ಸ್ಫೋಟಕಗಳ ಸಂಗ್ರಹ ಇತ್ತು: ಸಚಿವ ಮುರುಗೇಶ್ ನಿರಾಣಿ

February 24, 2021

ಚಿಕ್ಕಬಳ್ಳಾಪುರ: ಶಿವಮೊಗ್ಗ ಸ್ಫೋಟ ಘಟನೆಗೂ ಮುಂಚೆಯಿಂದಲೂ ಚಿಕ್ಕಬಳ್ಳಾಪುರ ಘಟನೆಯ ಸ್ಪೋಟಕಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಶಿವಮೊಗ್ಗ ಸ್ಫೋಟಕ್ಕೂ ಮುಂಚೆಯಿಂದಲೂ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಸದ್ಯ ಅಧಿಕೃತ ಕಾರ್ಯಗಳಿಗಾಗಿ ದೆಹಲಿಯಲ್ಲಿದ್ದೇನೆ. ಈ ಸಂಜೆ ಬೆಂಗಳೂರಿಗೆ ಬರಲಿದ್ದು, ನೇರವಾಗಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ , ಎಸ್ಪಿ ಹಾಗೂ ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.

error: Content is protected !!