ಕೂಡಿಗೆ ಜರ್ಸಿ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಡಾ.ಜಿ.ಕಲ್ಪನಾ ಭೇಟಿ

February 24, 2021

ಮಡಿಕೇರಿ.ಫೆ.24 : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರು ಇತ್ತೀಚೆಗೆ ಕೊಡಗು ಜಿಲ್ಲೆಯ ಪಶುಪಾಲನಾ ಇಲಾಖೆ, ಕೂಡಿಗೆ ಜರ್ಸಿ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರ ಮತ್ತು ಮೀನುಗಾರಿಕೆ ಇಲಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.
ಕೂಡಿಗೆ ಜರ್ಸಿ ತಳಿ ಸಂವರ್ಧನಾ ಕೇಂದ್ರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು. ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯಕ್ರಮಗಳು ರೈತರಿಗೆ ತಲುಪುವಂತಾಗಬೇಕು ಎಂದು ನಿರ್ದೇಶನ ನೀಡಿದರು.
ನಂತರ ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಕ್ಷೇತ್ರದ ಎಲ್ಲಾ ಘಟಕಗಳನ್ನು ಪರಿಶೀಲಿಸಿ, ಕ್ಷೇತ್ರದ ಸುತ್ತಲೂ ಹಮ್ಮಿಕೊಂಡ ಇಲಾಖೆಯ ವಿವಿಧ ಜಾನುವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಇತರರು ಇದ್ದರು.

error: Content is protected !!