ಮಾ.3 ರಂದು ಮಡಿಕೇರಿಯಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

February 24, 2021

ಮಡಿಕೇರಿ.ಫೆ.24 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಫೆಬ್ರವರಿ, 22 ಮತ್ತು 23 ರಂದು ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2021-22 ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗಿದ್ದು, ಈ ದಿನಾಂಕದಂದು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಅವಕಾಶ ವಂಚಿತರಾದ ಅಭ್ಯರ್ಥಿಗಳ ಆಯ್ಕೆಯು ಜಿಲ್ಲಾ ಮಟ್ಟದಲ್ಲಿ ಮಾರ್ಚ್, 03 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ತಿಳಿಸಿದ್ದಾರೆ.

error: Content is protected !!