ಸೋಮವಾರಪೇಟೆ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

February 25, 2021

ಸೋಮವಾರಪೇಟೆ ಫೆ.25 : ಜೇಸಿ ಸಂಸ್ಥೆಯ ವತಿಯಿಂದ ಸ್ಥಳೀಯ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಾಲೇಜಿನ ಆವರಣದಲ್ಲಿ ಈಚೆಗೆ ನೀಡಲಾಯಿತು.
ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಬೆಳ್ಳಿಯಪ್ಪ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೇಸಿ ಸಂಸ್ಥೆಯ ಅಧ್ಯಕ್ಷೆ ಮಾಯಾ ಗಿರೀಶ್ ವಹಿಸಿದ್ದರು. ರಾಷ್ಟ್ರೀಯ ತರಬೇತುದಾರರಾದ ಕುನಲ್ ಮಾಣಿಕ್ ಜೈನ್ ಹಾಗು ಸಹ ತರಬೇತುದಾರರಾದ ಪ್ರಜ್ವಲ್ ಜೈನ್ ಅವರುಗಳು ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಿದರು. ಈ ಸಂದರ್ಭ ಕಾರ್ಯದರ್ಶಿ ನೆಲ್ಸನ್, ಜೇಸಿರೇಟ್ ಪವಿತ್ರ ಲಕ್ಷ್ಮೀಕುಮಾರ್, ಕಾಲೇಜಿನ ಉಪನ್ಯಾಸಕರಾದ ತಿಲೋತ್ತಮೆ ಇದ್ದರು.
25ಎಸ್‍ಪಿಟಿ2:ಸೋಮವಾರಪೇಟೆ ಜೇಸಿ ಸಂಸ್ಥೆಯ ವತಿಯಿಂದ ಜೂನಿಯರ್ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಬೆಳ್ಳಿಯಪ್ಪ ಉದ್ಘಾಟಿಸಿ, ಮಾತನಾಡಿದರು. ಜೇಸಿ ಸಂಸ್ಥೆಯ ಅಧ್ಯಕ್ಷೆ ಮಾಯಾ ಗಿರೀಶ್, ರಾಷ್ಟ್ರೀಯ ತರಬೇತುದಾರ ಕುನಲ್ ಮಾಣಿಕ್ ಜೈನ್ ಇದ್ದರು.

error: Content is protected !!