ಕಾಡಾನೆ ದಾಳಿ ಪ್ರಕರಣ : ಎಂಎಲ್‍ಸಿ ವೀಣಾಅಚ್ಚಯ್ಯ ತೀವ್ರ ಅಸಮಾಧಾನ

February 26, 2021

ಮಡಿಕೇರಿ ಫೆ.26 : ಬೀಟಿಕಾಡು ಕಾಫಿ ತೋಟದಲ್ಲಿ ಕಾರ್ಮಿಕ ಯುವಕನ್ನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು, ಸರ್ಕಾರ ವನ್ಯಜೀವಿ ಉಪಟಳದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿದ್ದಾರೆ.
ಮೃತ ಯುವಕನ ಮನೆಗೆ ಭೇಟಿ ನೀಡಿದ್ದ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಪರಿಹಾರ ವಿತರಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ವೀಣಾಅಚ್ಚಯ್ಯ ಅವರು ಹುಲಿ ಮತ್ತು ಕಾಡಾನೆ ದಾಳಿಯಿಂದ ಪ್ರತಿದಿನ ಸಾವು ನೋವುಗಳಾಗುತ್ತಿದ್ದು, ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

error: Content is protected !!