ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 32

February 27, 2021

ಮಡಿಕೇರಿ ಫೆ. 27 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 4 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6182 ಆಗಿದ್ದು, 6068 ಮಂದಿ ಗುಣಮುಖರಾಗಿದ್ದಾರೆ.
32 ಸಕ್ರಿಯ ಪ್ರಕರಣಗಳಿದ್ದು, 82 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 25 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!