ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀದಂಡಿನ ಮಾರಿಯಮ್ಮ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

February 27, 2021

ಮಡಿಕೇರಿ ಫೆ. 27 : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.
ಫೆ.26 ರಂದು ಸಂಜೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ ನಂತರ ಮಹಾಮಂಗಳಾರತಿ ನಡೆಯಿತು.
ಇಂದು ಮುಂಜಾನೆಯಿಂದಲೇ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗ ಪೂಜೆ, ದೇವಿಗೆ ಅಲಂಕಾರ ಪೂಜೆ ಜರುಗಿದವು.
ಮಧ್ಯಾಹ್ನ ಮಹಾಪೂಜೆ ನಂತರ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.

error: Content is protected !!