ಕೊಡಗಿನ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದ ಶಿವಕುಮಾರ್

February 27, 2021

ಮಡಿಕೇರಿ ಫೆ.27 : ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭ ಕೊಡಗಿನ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದ ಅವರು ಪರಿಹಾರಕ್ಕಾಗಿ ಮನವಿ ಮಾಡಿದರು. ಬಜೆಟ್‍ನಲ್ಲಿ ಕೊಡವ ಹಾಕಿ ಹಬ್ಬಕ್ಕೆ ಅನುದಾನವನ್ನು ಮೀಸಲಿಡುವಂತೆ ಕೋರಿದರು.

error: Content is protected !!