ಮಾ.6 ರಂದು ಕಡಗದಾಳುವಿನಲ್ಲಿ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ

March 1, 2021

ಮಡಿಕೇರಿ ಮಾ. 1 : ಕಾರ್ನರ್ ಫ್ರೆಂಡ್ಸ್ ವತಿಯಿಂದ 7ನೇ ವರ್ಷದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಮಾ.6 ರಂದು ಕಡಗದಾಳು ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಸಮಿತಿಯ ಮಾಜಿ ಅಧ್ಯಕ್ಷ ಜಲೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾವಳಿಯನ್ನು ಮಧ್ಯಾಹ್ನ 2 ಗಂಟೆಗೆ ಕಡಗದಾಳು ಗ್ರಾಮದ ಗ್ಲಾಂಡಲ್ ಎಸ್ಟೇಟ್ ಮಾಲೀಕರಾದ ಕಿರಣ್ ಆಳ್ವರಿಸ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕ್ಯಾಪಿಟಲ್ ರೆಸಾರ್ಟ್ ಮಾಲೀಕರಾದ ಬಿ.ಎ ದೇವಯ್ಯ, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ತಾ.ಪಂ ಸದಸ್ಯ ಅಪ್ರು ರವೀಂದ್ರ, ಕಡಗದಾಳು ಗ್ರಾ.ಪಂ ಅಧ್ಯಕ್ಷ ಜಯಣ್ಣ ಸೇರಿದಂತೆ ಗ್ರಾ.ಪಂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ 12 ತಂಡಗಳು ಪ್ರಶಸ್ತಿಗಾಗಿ ನಾಕ್ ಔಟ್ ಮಾದರಿಯಲ್ಲಿ ಪರಸ್ಪರ ಸೆಣಸಲಿವೆ.ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 20 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ 12 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನವಾಗಿ 4 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದೆಂದು ತಿಳಿಸಿದರು.

ಸನ್ಮಾನ-ಇದೇ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು.

ಆಸಕ್ತ ತಂಡಗಳು 1200ರೂ. ಪ್ರವೇಶ ಶುಲ್ಕ ಪಾವತಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಲೀಲ್-9480499802, ದಿನು-9480084330, ಸುಜಿನ್-7760895087, ರಾಹುಲ್-9741391046 ಸಂಪರ್ಕಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ತಂಡದ ಉಪಾಧ್ಯಕ್ಷ ಕೆ.ಕುಂಞಬ್ಬ, ಖಜಾಂಚಿ ಎ.ಕೆ. ಪುನೀತ್, ಸದಸ್ಯರಾದ ಪಿ.ಬಿ. ಪ್ರಮೋದ್ ಗಣೇಶ್, ಎಂ.ಟಿ.ದಿಲನ್ ಉಪಸ್ಥಿತರಿದ್ದರು.

error: Content is protected !!