ಕೋವಿಡ್ ಲಸಿಕೆ ಪಡೆದ ಶಾಸಕ ಅಪ್ಪಚ್ಚುರಂಜನ್ ಹಾಗೂ ಪತ್ನಿ ಶೈಲಾ

March 1, 2021

ಮಡಿಕೇರಿ ಮಾ.1 : ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹಾಗೂ ಪತ್ನಿ ಶೈಲಾ ಅವರುಗಳು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದರು. ವೈದ್ಯರಾದ ಸತೀಶ್ ಹಾಗೂ ಭಾನುಮತಿ ಅವರು ಲಸಿಕೆ ನೀಡಿದರು.
ಈ ಸಂದರ್ಭ ಮಾತನಾಡಿದ ರಂಜನ್ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ 60 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ತೆಗೆದುಕೊಳ್ಳಬೇಕು. ಕೊರೊನಾ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.

error: Content is protected !!