ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಕೊಡಗು ಪ್ರವಾಸ

March 2, 2021

ಮಡಿಕೇರಿ ಮಾ.2 : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರು ಮಾ.3, 4 ಮತ್ತು 6 ರಂದು ಕೊಡಗಿನ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯ ಕುರಿತು ಚರ್ಚಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.
ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಅಧ್ಯಕ್ಷರು ಕೇಂದ್ರ ಹಾಗೂ ರಾಜ್ಯ ಸರ್ಕಾರದÀ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಾ.3 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಬ್ಲಾಕ್, ಮಧ್ಯಾಹ್ನ 2.30ಕ್ಕೆ ಸೋಮವಾರಪೇಟೆ ಬ್ಲಾಕ್ ಗೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ. ಮಾ.4 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ಬ್ಲಾಕ್, ಮಧ್ಯಾಹ್ನ 2.30ಕ್ಕೆ ನಾಪೋಕ್ಲು ಬ್ಲಾಕ್, ಮಾ.6 ರಂದು ಬೆಳಗ್ಗೆ 11 ಗಂಟೆಗೆ ವಿರಾಜಪೇಟೆ ಬ್ಲಾಕ್, ಮಧ್ಯಾಹ್ನ 2.30ಕ್ಕೆ ಪೊನ್ನಂಪೇಟೆ ಬ್ಲಾಕ್‍ಗೆ ಭೇಟಿ ನೀಡಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭ ವಿಧಾನಪರಿಷತ್ ಸದಸ್ಯರು, ಚುನಾಯಿತ ಕಾಂಗ್ರೆಸ್ ಪ್ರತಿನಿಧಿಗಳು, ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಸಂಯೋಜಕರು, ವೀಕ್ಷಕರು, ಪಕ್ಷದ ಉಸ್ತುವಾರಿಗಳು, ಹಿರಿಯ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುರೇಶ್ ಹೇಳಿದ್ದಾರೆ.

error: Content is protected !!