ಮಾ.4 ರಂದು ಕುಶಾಲನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

March 2, 2021

ಮಡಿಕೇರಿ ಮಾ.02 : ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭುವನಗರಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿದ್ದು, ಮಾರ್ಚ್, 04 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡಿಗೆ ಸೀಗೆಹೊಸೂರು, ಭುವನಗಿರಿ, ಹುದುಗೂರು ಹಾರಂಗಿ ಯಡವನಾಡು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

error: Content is protected !!