ಮಾ.9 ರಂದು ಮಡಿಕೇರಿ ನಗರ ಹಿತರಕ್ಷಣಾ ವೇದಿಕೆಯ ವಾರ್ಷಿಕೋತ್ಸವ

March 2, 2021

ಮಡಿಕೇರಿ ಮಾ.2 : ಮಡಿಕೇರಿ ನಗರ ಹಿತರಕ್ಷಣಾ ವೇದಿಕೆಯ 2ನೇ ವಾರ್ಷಿಕೋತ್ಸವ ಮಾ.9 ರಂದು ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ರವಿಗೌಡ ತಿಳಿಸಿದ್ದಾರೆ.
ಅಂದು ಸಂಜೆ 4 ಗಂಟೆಗೆ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ನಗರಸಭಾ ಪೌರಯುಕ್ತ ಎಸ್.ವಿ.ರಾಂದಾಸ್, ಮಡಿಕೇರಿ ನಗರ ಠಾಣಾಧಿಕಾರಿ ಎಂ.ಟಿ.ಅಂತಿಮ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರಪೇಟೆ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ, ಕಾನೂನು ಸಲಹೆಗಾರ ಕುಂಞ ಅಬ್ದುಲ್ಲ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

error: Content is protected !!