ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 41

March 3, 2021

ಮಡಿಕೇರಿ ಮಾ. 3 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 7 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6200 ಆಗಿದ್ದು, 6077 ಮಂದಿ ಗುಣಮುಖರಾಗಿದ್ದಾರೆ.
41 ಸಕ್ರಿಯ ಪ್ರಕರಣಗಳಿದ್ದು, 82 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 26 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!