ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

March 3, 2021

ಮಡಿಕೇರಿ.ಮಾ.03 : ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಖಾಲಿ ಇರುವ ಸ್ಥಾನಗಳಿಗೆ ಮಾಹೆಯಾನ ರೂ.7 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಂದ ಪಡೆಯುವುದು.
ಖಾಲಿ ಇರುವ ಹುದ್ದೆಗಳ ಮೀಸಲಾತಿ ವಿವರ:- ವಿರಾಜಪೇಟೆ ತಾಲೂಕಿನ ಹೊಸೂರು ಅಮ್ಮತ್ತಿ ಗ್ರಾ.ಪಂ.ಗ್ರಂಥಾಲಯ ಸಾಮಾನ್ಯ ಅಭ್ಯರ್ಥಿ (ಮಾ.ಸೈ) ಮತ್ತು ಆಲೂರು ಸಿದ್ದಾಪುರ ಗ್ರಾ.ಪಂ. ಗ್ರಂಥಾಲಯ 2ಎ(ಸಾ.ಅ). ಸೋಮವಾರಪೇಟೆ ತಾಲೂಕು ಶಿರಂಗಾಲ ಗ್ರಾ.ಪಂ. ಗ್ರಂಥಾಲಯ ಸಾ.ಅ(ಸಾ.ಅ) ಮತ್ತು ಚೆಂಬೆ ಬೆಳ್ಳೂರು ಗ್ರಾ.ಪಂ. ಗ್ರಂಥಾಲಯ ಪ್ರವರ್ಗ-1(ಮಹಿಳಾ ಅಭ್ಯರ್ಥಿ). ಅರ್ಜಿ ಸಲ್ಲಿಸಲು ಮಾರ್ಚ್, 30 ಕೊನೆಯ ದಿನವಾಗಿದೆ.
ವಿದ್ಯಾರ್ಹತೆಯ ಹಾಗೂ ಇತರೆ ದಾಖಲೆಗಳನ್ನು ದೃಡೀಕರಿಸಿದ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬಂಧಪಟ್ಟ ಗ್ರಾ.ಪಂ. ಕಚೇರಿಗೆ ಸಲ್ಲಿಸುವುದು. ಹಾಗೂ ಹೆಚ್ಚಿನ ವಿವರಗಳಿಗೆ ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ದೂ.ಸಂ.08272 225463 ಅಥವಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!