ಪೆಟ್ರೋಲ್ ಬಂಕ್‌ಗಳಿಂದ ಮೋದಿ ಭಾವಚಿತ್ರವಿರುವ ಜಾಹೀರಾತು ತೆರವಿಗೆ ಚುನಾವಣಾ ಆಯೋಗ ಆದೇಶ

March 4, 2021

ಕೋಲ್ಕತ್ತಾ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಕೇವಲ ರಾಜಕೀಯ ಪಕ್ಷಗಳ ಸದ್ದು ಮಾತ್ರ ಕೇಳಿ ಬರುತ್ತಿಲ್ಲ. ಬದಲಿಗೆ ಭಾರತೀಯ ಚುನಾವಣಾ ಆಯೋಗದ ಧ್ವನಿ ಕೂಡ ಕೇಳಿ ಬರುತ್ತಿದೆ.

ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಹಾಕಿರುವ ಪ್ರಧಾನಿ ಮೋದಿ ಅವರ ಭಾವಚಿತ್ರವಿರುವ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನೊಳಗೊಂಡ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಚುನಾವಣಾ ಸಮಯದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರವಿರುವ ಜಾಹೀರಾತು ಇರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಈ ಕಾರಣಕ್ಕೆ ಮುಂದಿನ 72 ಗಂಟೆಗಳಲ್ಲಿ ರಾಜ್ಯದ ಎಲ್ಲಾ ಪೆಟ್ರೋಲ್ ಬಂಕ್‌ಗಳಿಂದ ಪ್ರಧಾನಿ ಮೋದಿ ಅವರ ಭಾವಚಿತ್ರವಿರುವ ಜಾಹೀರಾತು ಹೋರ್ಡಿಂಗ್‌ಗಳನ್ನು ತೆರವುಗೊಳಿಸುವಂತೆ ಚುನಾವಣಾ ಆಯೋಗ ಆದೇಶ ಜಾರಿ ಮಾಡಿದೆ.

error: Content is protected !!