ಆದಿ ಮುತ್ತಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ತೆರೆ ಮಹೋತ್ಸವ

March 4, 2021

ವಿರಾಜಪೇಟೆ, ಮಾ. 4: ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ನೆಲೆ ಕಂಡ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ತೆರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.

ವಿರಾಜಪೇಟೆ ತಾಲ್ಲೂಕಿನ ಕದನೂರು-ಬೋಯಿಕೇರಿ ಗ್ರಾಮದಲ್ಲಿ ನೆಲೆ ಕಂಡ ಸುಮಾರು 400 ವರ್ಷಗಳ ಇತಿಹಾಸವಿರುವ ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಮುತ್ತಪ್ಪನ್ ವೆಳ್ಳಾಟಂ ಮತ್ತು ಶ್ರೀ ಗುಳಿಗನ್ ವೆಳ್ಳಾಟಂ ತೆರೆಗಳು ಜರುಗಿದವು.
ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ನಡೆದ ತೆರೆ ಮಾಹೋತ್ಸವದಲ್ಲಿ ವಿವಿಧ ಗ್ರಾಮಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಉತ್ಸವದ ಅಂಗವಾಗಿ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಸಂಜೆ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

error: Content is protected !!