ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಸರ್ ಸಿ.ವಿ. ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ಮಡಿಕೇರಿ ಮಾ.4 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ (ಕ.ರಾ.ವಿ.ಪ.), ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನಲ್ಲಿ ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ,ಸಮಗ್ರ ಶಿಕ್ಷಣ ಕರ್ನಾಟಕ, ಕ.ರಾ.ವಿ.ಪ.ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಮೊದಲಿಗೆ ಲಿಖಿತ ಪರೀಕ್ಷೆ ಬರೆದ 17 ತಂಡಗಳ ಪೈಕಿ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಮೊದಲ ಮೂರು ತಂಡಗಳು ಮೌಖಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಮೊದಲಿಗೆ 5 ಸುತ್ತಿನಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಅಂತಿಮವಾಗಿ ವಿಜ್ಞಾನ ಪ್ರಯೋಗಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಪ್ರಯೋಗಗಳ. ಹಿಂದಿರುವ ವೈಜ್ಞಾನಿಕ ಕಾರಣಗಳನ್ನು ಕೇಳಲಾಯಿತು.
ಮಕ್ಕಳಿಗೆ ಮೌಖಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ವಿಜ್ಞಾನ ಮತ್ತು ಗಣಿತ ಪಠ್ಯಕ್ಕನುಗುಣವಾಗಿ ನಿತ್ಯಜೀವನದಲ್ಲಿ ಗಣಿತ, ಹಾಗೂ ವಿಜ್ಞಾನದ ಬಳಕೆ, ವಿಜ್ಞಾನಿಗಳ ಸಂಶೋಧನೆ ಮತ್ತು ಸಾಧನೆ, ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗಳು, ಭಾರತದ ಪ್ರಮುಖ ವೈಜ್ಞಾನಿಕ ಸಂಸ್ಥೆಗಳ ಯಶಸ್ವಿ ಸಂಶೋಧನೆಗಳು, ಪ್ರಚಲಿತ ವೈಜ್ಞಾನಿಕ ಸಂಶೋಧನೆಗಳು ಸೇರಿದಂತೆ ವಿಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಆವಿμÁ್ಕರಗಳ ಕುರಿತು ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಲಾಯಿತು.
ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕರೂ ಆದ ಕ್ವಿಜ್ ಮಾಸ್ಟರ್ ಬಲ್ಲಮಾವಟಿ ನೇತಾಜಿ ಪ್ರೌಢಶಾಲಾ ಗಣಿತ ಶಿಕ್ಷ ಸಿ.ಎಸ್.ಸುರೇಶ್, ನಾಪೆÇೀಕ್ಲು ರಾಮಟ್ರಸ್ಟ್ ಶಾಲೆಯ ಗಣಿತ ಶಿಕ್ಷಕಿ ಎನ್.ಎಸ್.ಚಂದ್ರಕಲಾ ಸಹಾಯಕ ಕ್ವಿಜ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮ ಸಂಘಟಕ ಟಿ.ಜಿ.ಪ್ರೇಮಕುಮಾರ್, ತೊರೆನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಿ.ಶ್ರೀಹರ್ಷ, ಶಿಕ್ಷಣ ಇಲಾಖೆಯ ಕಂಪ್ಯೂಟರ್ ಪೆÇ್ರೀಗ್ರಾಮರ್ ಡಿ.ಎಸ್.ಪ್ರಸಾದ್ ರಸಪ್ರಶ್ನೆ ಸ್ಪರ್ಧೆಗೆ ಸಹಕರಿಸಿದರು. ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕಾರ್ಯಕ್ರಮದ ನೋಡಲ್ ಅಧಿಕಾರಿ ಎಸ್.ಟಿ.ವೆಂಕಟೇಶ್, ಶಿಕ್ಷಕ ಹ್ಯೂಬರ್ಟ್ ಡಯಾಸ್ ಇತರರು ಇದ್ದರು.



