ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಸಿಇಓ ಮುಖ್ಯ ಶಿಕ್ಷಕರಿಗೆ ಕರೆ

March 4, 2021

ಮಡಿಕೇರಿ. ಮಾ.4 : -ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್. ಪರೀಕ್ಷಾ ಫಲಿತಾಂಶವನ್ನು ಉತ್ತಮ ಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಕರೆ ನೀಡಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಉತ್ತಮಪಡಿಸುವ ಸಂಬಂಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ನಂತರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.
ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಗೆ ಕ್ರಿಯಾಯೋಜನೆ ತಯಾರಿಸಿಕೊಂಡು ವಿಶೇಷ ತರಗತಿ/ ಬೋಧನೆ ಮೂಲಕ ಆ ಮಕ್ಕಳ ಕಲಿಕಾ ಸಾಮಥ್ರ್ಯ ವೃದ್ಧಿಸುವ ಮೂಲಕ ಅವರೂ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಲು ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕು ಎಂದು ಮೀನಾ ಸಲಹೆ ನೀಡಿದರು.
ಐಚ್ಚಿಕ ವಿಷಯಗಳಾದ ಗಣಿತ, ವಿಜ್ಞಾನ ಹಾಗೂ ಸಮಾಜ ವಿಷಯಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸುವ ದಿಸೆಯಲ್ಲಿ ವಿದ್ಯಾರ್ಥಿಗಳು ಈ ವಿಷಯಗಳಲ್ಲಿ ಕೂಡ ಉತ್ತಮ ಅಂಕಗಳನ್ನು ಗಳಿಸುವಂತಾಗಲು ಆಯಾಯ ವಿಷಯ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಯಾವುದೇ ಮಗು ಕೂಡ ಶಾಲೆಯಿಂದ ಹೊರಗುಳಿಯದಂತೆ ಹಾಗೂ ಮಕ್ಕಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುವ ದಿಸೆಯಲ್ಲಿ ಶಿಕ್ಷಕರು ಮಕ್ಕಳ ಮನೆಗೆ ಭೇಟಿ ನೀಡುವುದು ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸಭೆ ಸಂಘಟಿಸುವುದು, ವಿದ್ಯಾರ್ಥಿ ಪೆÇೀಷಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದರೆ ಮಕ್ಕಳ ಕಲಿಕಾ ಪ್ರಗತಿಯು ನಿರೀಕ್ಷಿತ ಮಟ್ಟದಲ್ಲಿ ಸಿಗಲಿದೆ ಎಂದರು.
ಶಿಕ್ಷಕರು ತಮ್ಮ ಪರಿಣಾಮಕಾರಿ ಬೋಧನೆ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹಾಗೂ ಆತ್ಮಸ್ಥೈರ್ಯ ಬೆಳೆಸಿ ಅವರಲ್ಲಿ ಕಲಿಕಾ ಪ್ರೇರೇಪಣೆ ಮತ್ತು ಧನಾತ್ಮಕ ಚಿಂತನೆ ಮೂಡಿಸಬೇಕು ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ಬೌದ್ಧಿಕ ಸಾಮಥ್ರ್ಯವನ್ನು ಅರ್ಥ ಮಾಡಿಕೊಂಡು ಪರಿಣಾಮಕಾರಿ ಬೋಧನೆಯೊಂದಿಗೆ ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶವನ್ನು ಜಿಲ್ಲೆಯಲ್ಲಿ ಉತ್ತಮಗೊಳಿಸುವ ಕುರಿತು ಹಲವು ಸಲಹೆಗಳನ್ನು ಸಿಇಒ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ಪ್ರಗತಿ ಹಾಗೂ ಪ್ರಸಕ್ತ ಸಾಲಿನಲ್ಲಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಕೈಗೊಂಡಿರುವ ಶೈಕ್ಷಣಿಕ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಫಲಿತಾಂಶವನ್ನು ಉತ್ತಮಪಡಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳ ನೇತೃತ್ವದ ತಂಡಗಳು ಪ್ರತಿ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಕೈಗೊಂಡಿರುವ ವಿವಿಧ ಶೈಕ್ಷಣಿಕ ಸುಧಾರಣಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಪಾಂಡು, ಶ್ರೀಶೈಲ ಬೀಳಗಿ, ಟಿ.ಎನ್.ಗಾಯತ್ರಿ ಅವರು ತಮ್ಮ ತಾಲ್ಲೂಕುಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ತಾಲ್ಲೂಕುವಾರು ಕೈಗೊಂಡಿರುವ ಕ್ರಿಯಾಯೋಜನೆ, ಸುಧಾರಣಾ ಕ್ರಮಗಳು ಹಾಗೂ ತರಬೇತಿ ಕಾರ್ಯಾಗಾರಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.
ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಎ.ಶ್ರೀಧರನ್, ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಜಿಲ್ಲಾ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಹಸೀನಾ, ಡಯಟ್ ನ ಹಿರಿಯ ಉಪನ್ಯಾಸಕರಾದ ಕೆ.ವಿ.ಸುರೇಶ್, ಶಿವಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಸ್.ಟಿ.ವೆಂಕಟೇಶ್, ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ರಚಿಸಿರುವ ತಾಲ್ಲೂಕುವಾರು ತಂಡದ ಸದಸ್ಯರು, ತಾಲ್ಲೂಕು ಶಿಕ್ಷಣ ಸಂಯೋಜಕರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಳೆದ ಸಾಲಿನ ಪರೀಕ್ಷಾ ಫಲಿತಾಂಶವನ್ನು ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಹಾಗೂ ತಾಲ್ಲೂಕುವಾರುಮಟ್ಟ ಹಾಗೂ ವಿಷಯವಾರು ವಿಶ್ಲೇಷಣೆ ಮಾಡಿ ಪಿಪಿಟಿ ಮೂಲಕ ಪ್ರದರ್ಶಿಸಿ ಮಾಹಿತಿ ನೀಡಲಾಯಿತು.

error: Content is protected !!