ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

March 4, 2021

ಮಡಿಕೇರಿ ಮಾ.4 : ಪ್ರಸಕ್ತ(2020-21) ಸಾಲಿನಲ್ಲಿ ಪರಿಶಿಷ್ಟ ಜಾತಿ ಜನಾಂಗದವರಿಗೆ ಕೌಶಲ್ಯ ತರಬೇತಿ ನೀಡುವ ಸಲುವಾಗಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರಿಗೆ ವಿವಿಧ ಉದ್ದೇಶಗಳಡಿ ಕೌಶಲ್ಯ ತರಬೇತಿ ನೀಡುವ ಸಂಬಂಧ ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಮ್ ಕೋರ್ಸ್, ಕಾಲ್ ಸೆಂಟರ್ ಟ್ರೈನಿಂಗ್, ಕಂಪ್ಯೂಟರೈಸ್‍ಡ್ ಫ್ಯಾಷನ್ ಡಿಸೈನಿಂಗ್, ಟೈಲರಿಂಗ್ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುವುದು. ಆಸಕ್ತರು ಜಿಲ್ಲಾ ಕಚೇರಿಯಿಂದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾರ್ಚ್, 20 ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ(ದೂ.ಸಂ.08272-228857) ಇಲ್ಲಿಗೆ ಖುದ್ದು ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

error: Content is protected !!