ವಿರಾಜಪೇಟೆ ಸರ್ಕಾರಿ ಕಾಲೇಜಿನಲ್ಲಿ ಶುಕ್ರವಾರ ವಿವಿಧ ಸಮಿತಿಗಳ ಉದ್ಘಾಟನೆ

March 4, 2021

ಮಡಿಕೇರಿ: ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ (ಮಾರ್ಚ್ 05) ರಂದು ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭ ಬೆಳಗ್ಗೆ 10:30 ಗಂಟೆಗೆ ನಡೆಯಲಿದೆ ಎಂದು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೃತಿ ಪಾರ್ವತಿ, ಹಾಗೂ ಕ್ರೀಡಾ ಸಮಿತಿ ಸಂಚಾಲಕರು ಹಾಗೂ ಕ್ರೀಡಾ ವಿಭಾಗದ ನಿರ್ದೇಶಕಿಯಾದ ರಾಕಿ‌ ಪೂವಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಇವರು, ಕಾರ್ಯಕ್ರಮದ ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕರು,ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಜಿ ಬೋಪಯ್ಯರವರು ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ|| ಎಸ್ ಬಾಲಾಜಿ, ಒಲಂಪಿಯನ್  ಮಾಜಿ ಅಂತರಾಷ್ಟ್ರೀಯ ಮಟ್ಟದ ಆಟಗಾರ ಬಾಳೆಯಂಡ ಕೆ .ಸುಬ್ರಮಣಿ, ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮುಕೊಂಡ ಬೋಸ್ ದೇವಯ್ಯ, ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ|| ಟಿ.ಕೆ ಬೋಪಯ್ಯ ವಹಿಸಿಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ವಿವಿಧ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೃತಿ ಪಾರ್ವತಿ, ಹಾಗೂ ಕ್ರೀಡಾ ಸಮಿತಿ ಸಂಚಾಲಕರು ಹಾಗೂ ಕ್ರೀಡಾ ವಿಭಾಗದ ನಿರ್ದೇಶಕಿಯಾದ ರಾಕಿ‌ ಪೂವಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!