ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ : ಸಿಇಓ ಭಂವರ್ ಸಿಂಗ್ ಮೀನಾ ಕರೆ

March 5, 2021

ಮಡಿಕೇರಿ ಮಾ.5: ವಿದ್ಯಾರ್ಥಿಗಳು ಶ್ರೇಷ್ಠ ವಿಜ್ಞಾನಿಗಳ ಸಂಶೋಧನೆ ಮತ್ತು ಅವರ ಸಾಧನೆ ಬಗ್ಗೆ ಹೆಚ್ಚಿನ ಅಧ್ಯಯನದೊಂದಿಗೆ ಸಂಶೋಧನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡುವ ಮೂಲಕ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಕರೆ ಗುರುವಾರ ವಿದ್ಯಾರ್ಥಿಗಳಿಗೆ ನೀಡಿದರು.
ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ನಗರದ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆ ಯ ಸಹಯೋಗದಲ್ಲಿ ಗುರುವಾರ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲೇ ಮೂಲ ವಿಜ್ಞಾನ ಕಲಿಕೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದ ಅವರು, ತಾವು ವಿದ್ಯಾರ್ಥಿ ದಿಸೆಯಲ್ಲಿ ಇಂತಹ ವಿಜ್ಞಾನ ಸ್ಪರ್ಧೆಗಳಿಗೆ ಭಾಗವಹಿಸಿದ್ದನ್ನು ಮೆಲಕು ಹಾಕಿದರು.
ವಿಜ್ಞಾನ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ಎದುರಾಗುವ ಎಲ್ಲಾ ಸವಾಲುಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಸಿಇಒ ಭಂವರ್ ಸಿಂಗ್ ಮೀನಾ, ವಿದ್ಯಾರ್ಥಿಗಳಿಗೆ ಹಲವು ದೃμÁ್ಟಂತಗಳೊಂದಿಗೆ ವೈಜ್ಞಾನಿಕ ಕಲಿಕೆ ಮತ್ತು ಸಂಶೋಧನೆ ನಡೆಸುವ ಕುರಿತು ಹಲವು ಸಲಹೆಗಳನ್ನು ನೀಡಿದರು.
ಮೂಲ ವಿಜ್ಞಾನ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ, ಕುತೂಹಲ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನ ಕಲಿಕೆಯಲ್ಲಿ ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹೊಂದಬೇಕು ಎಂದರು.
ಇಂತಹ ವಿಜ್ಞಾನ ಸ್ಪರ್ಧೆಗಳು ಮಕ್ಕಳಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರಣೆ ನೀಡುತ್ತವೆ. ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ವಿಜ್ಞಾನ ಪರಿಷತ್ತಿನ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ವಿವಿಧ ವಿಜ್ಞಾನ ಚಟುವಟಿಕೆಗಳು ಮತ್ತು ಸ್ಪರ್ಧೆಗಳಲ್ಲಿ ಕೊಡಗಿನ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದರು.
ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳ ಬಗ್ಗೆ ಹಿರಿಯ ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸುವ ಮೂಲಕ ಪರಿಹಾರ ಕಂಡುಕೊಳ್ಳುವ ಮೂಲಕ ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಸಂಘಟಕರೂ ಆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ನಿಕಟ ಪೂರ್ವ ಜಂಟಿ ಕಾರ್ಯದರ್ಶಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿಜ್ಞಾನ ಪರಿಷತ್ತಿನ ವತಿಯಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಆಸಕ್ತಿ ಬೆಳೆಸುವುದರೊಂದಿಗೆ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸುವ ಮೂಲಕ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲಾಗುತ್ತಿದೆ ಎಂದರು.
ಮಡಿಕೇರಿ ತಾ.ಪಂ.ಇಒ ಪಿ.ಲಕ್ಷ್ಮಿ ಮಾತನಾಡಿ, ವಿಜ್ಞಾನವು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿದ್ದು, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯನ್ನು ಹವ್ಯಾಸವಾಗಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ವಿಜ್ಞಾನ ಪರಿಷತ್ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ಸಂಘಟಕರಾದ ಟಿ.ಜಿ.ಪ್ರೇಮಕುಮಾರ್ ಮತ್ತು ತಂಡದ ಸದಸ್ಯರು ವಿಜ್ಞಾನ ಮತ್ತು ಪರಿಸರ ಚಟುವಟಿಕೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಜನರಲ್ಲಿ ವಿಜ್ಞಾನ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಕೇರಳದ ತಿರುವನಂತಪುರದಲ್ಲಿ ಕಳೆದ ವರ್ಷ ಜರುಗಿದ 27 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ಉತ್ತಮವಾಗಿ ವೈಜ್ಞಾನಿಕ ಪ್ರಬಂಧ ಮಂಡಿಸಿದ ಕಿರಿಯ ವಿಜ್ಞಾನಿಗಳಾದ ಅಭಯ್ ಕೌಶಿಕ್, ದೀಪ್ತಿ ಸಿ. ಜೋಷಿ, ಕೆ.ಗಾಯತ್ರಿ, ಮಾರ್ಗದರ್ಶಿ ಶಿಕ್ಷಕಿಯರಾದ ಸುಮಿತ್ರ, ಕೆ. ಫ್ಲಾರೆನ್ಸ್ ಹಾಗೂ ಮಡಿಕೇರಿ ತಾ.ಪಂ.ಇಒ ಆಗಿ, ಇದೀಗ ಜಿ.ಪಂ.ನ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ಹೊಂದಿರುವ ಪಿ.ಲಕ್ಷ್ಮಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ಸನ್ಮಾನಿಸಿ ಗೌರವಿಸಿದರು.
ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ. ವೆಂಕಟೇಶ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ನಿಕಟ ಪೂರ್ವ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ, ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ಕ್ವಿಜ್ ಮಾಸ್ಟರ್ ಸಿ.ಎಸ್.ಸುರೇಶ್, ಕ್ವಿಜ್ ಸಹಾಯಕಿ ನಾಪೆÇೀಕ್ಲು ರಾಮಟ್ರಸ್ಟ್ ಶಾಲೆಯ ಶಿಕ್ಷಕಿ ಎನ್.ಎಸ್. ಚಂದ್ರಕಲಾ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಜಿಮ್ಮಿ ಸಿಕ್ವೇರಾ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಂ.ರೇವತಿ, ಹ್ಯೂಬರ್ಟ್ ಡಯಾಸ್ ಇತರರು ಇದ್ದರು.

error: Content is protected !!