ವಕೀಲ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ : ಮಡಿಕೇರಿಯಲ್ಲಿ ವಕೀಲರ ಪ್ರತಿಭಟನೆ

March 5, 2021

ಮಡಿಕೇರಿ ಮಾ.5 : ದೇಶದ ವಿವಿಧೆಡೆ ನಡೆಯುತ್ತಿರುವ ವಕೀಲರ ಮೇಲಿನ ದಾಳಿಯನ್ನು ಖಂಡಿಸಿ ಮತ್ತು ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಮಡಿಕೇರಿ ವಕೀಲರ ಸಂಘ ಪ್ರತಿಭಟನೆ ನಡೆಸಿತು.
ರಾಜ್ಯ ಮತ್ತು ಕೇಂದ್ರ ಸರ್ಕಾರ ವಕೀಲರ ರಕ್ಷಣೆಗಾಗಿ ವಕೀಲ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಉಪಾಧ್ಯಕ್ಷ ಪಿ.ಯು.ಪ್ರೀತಮ್, ಕಾರ್ಯದರ್ಶಿ ಡಿ.ಜಿ.ಕಿಶೋರ್, ವಕೀಲರುಗಳಾದ ಪವನ್ ಪೆಮ್ಮಯ್ಯ, ರಾಜೇಶ್, ಭಾನುಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!