ಮಹಾಶಿವರಾತ್ರಿ ಪ್ರಯುಕ್ತ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಗಳ ಮಾಹಿತಿ
March 6, 2021

ಮಡಿಕೇರಿ ಮಾ.6 : ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಮಾ.11 ರಂದು ಮಹಾಶಿವರಾತ್ರಿ ಪ್ರಯುಕ್ತ “ಶ್ರೀರುದ್ರ ಹೋಮ” ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಸಹಯೋಗದಲ್ಲಿ ಮಾ.11 ರಂದು ಬೆಳಗ್ಗೆ 9.30 ಗಂಟೆಗೆ ರುದ್ರಹೋಮ ಪ್ರಾರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, 12.30ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ನಡೆಯಲಿದೆ.
ಶ್ರೀರುದ್ರ ಹೋಮದಲ್ಲಿ ಭಾಗವಹಿಸುವವರು ಮುಂಗಡವಾಗಿ ರೂ.150ನ್ನು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಮಹಾಶಿವರಾತ್ರಿ ಪ್ರಯುಕ್ತ ರಾತ್ರಿ ದೇವಾಲಯದಲ್ಲಿ ನಾಲ್ಕು ಜಾವದ ಪೂಜೆ ನೆರವೇರಲಿದೆ.